ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿಯಲ್ಲಿನ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಮೂಹ ಸಂಪನ್ಮೂಲ ಕೇಂದ್ರದ ಕಟ್ಟಡವನ್ನು ಬೈಂದೂರು ಶಾಸಕ ಕೆ.ಲಕ್ಷ್ಮೀನಾರಾಯಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗಂಗೊಳ್ಳಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಈ ಸಮೂಹ ಸಂಪನ್ಮೂಲ ಕೇಂದ್ರದ ಸದುಪಯೋಗವನ್ನು ಎಲ್ಲ ಶಾಲೆಗಳು ಪಡೆದುಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.
ಕುಂದಾಪುರ ತಾ.ಪಂ. ಅಧ್ಯಕ್ಷೆ ದೀಪಿಕಾ ಶೆಟ್ಟಿ, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಗಂಗೊಳ್ಳಿಯ ಉದ್ಯಮಿ ಎಚ್. ಗಣೇಶ ಕಾಮತ್, ಗಂಗೊಳ್ಳಿ ಗ್ರಾ.ಪಂ. ಅಧ್ಯಕ್ಷೆ ಸಾಕಮ್ಮ, ಗ್ರಾ.ಪಂ. ಸದಸ್ಯ ಬಿ.ರಾಘವೇಂದ್ರ ಪೈ, ಗಣೇಶ್ ಪಿ., ಸುರೇಖಾ ಕಾನೋಜಿ, ಜಯಂತಿ ಕಾನೋಜಿ, ಗಂಗೊಳ್ಳಿ ಕ್ಲಸ್ಟರ್ನ ಸಮೂಹ ಸಂಪನ್ಮೂಲ ವ್ಯಕ್ತಿ ಉಮೇಶ್, ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತಾ ಕೆ., ಎಸ್ಡಿಎಂಸಿ ಅಧ್ಯಕ್ಷ ನಾಗರಾಜ ಖಾರ್ವಿ, ಮೋಹನದಾಸ ಕಾನೋಜಿ, ಎಸ್ಡಿಎಂಸಿ ಸದಸ್ಯರು ಇದ್ದರು.
ಕುಂದಾಪ್ರ ಡಾಟ್ ಕಾಂ - editor@kundapra.com