ಅಂತರಾಷ್ಟ್ರೀಯ ಕ್ರೀಡಾಪಟು ಕಿಶೋರ್ ಕುಮಾರ್ ಗೆ ಸನ್ಮಾನ


 ಗಂಗೊಳ್ಳಿ: ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಹಾಗೂ ಮಾತೃಶ್ರೀ ಬಾಲಕಿಯರ ಭಜನಾ ತಂಡ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸ. ವಿ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಮಾತೃಶ್ರೀ ದಿ| ಧರ್ಮಸ್ಥಳ ರತ್ನಮ್ಮ ಹೆಗ್ಗಡೆ ಪುಣ್ಯಸ್ಮೃತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು ಕಿಶೋರ್ ಕುಮಾರ್ ಎಸ್. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
        ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್ ವಹಿಸಿದ್ದರು. ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಮಾಜಿ ಅಧ್ಯಕ್ಷೆ ನಾಗರತ್ನ ಯು.ಶೇಟ್, ಪತ್ರಕರ್ತ ಬಿ.ರಾಘವೇಂದ್ರ ಪೈ, ಬಡಾಕೆರೆ ಸ. ಹಿ. ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಮಹಾಬಲ ಕೆ. ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ತ್ರಾಸಿ ವಲಯ ಅಧ್ಯಕ್ಷ ಕೃಷ್ಣ ಪೂಜಾರಿ, ಎಸ್.ವಿ.ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ ಕಾಮತ್, ಶ್ರೀ ಇಂದುಧರ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಕೃಷ್ಣ ಎಸ್, ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಸಂಜೀವ ಜಿ.ಟಿ., ಇಂದುಶ್ರೀ ಮಹಿಳಾ ಸಂಘದ ಗೌರವಾಧ್ಯಕ್ಷೆ ನಾಗಮ್ಮ ಉಪಸ್ಥಿತರಿದ್ದರು.
        ಮಹಿಳಾ ಸಂಘದ ಕಾರ್ಯದರ್ಶಿ ನಾಗರತ್ನ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ದೇವಳದ ಮೊಕ್ತೇಸರ ಈಶ್ವರ ವಂದಿಸಿದರು.
ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com