ಅಧ್ಯಯನ ಪ್ರವಾಸ ಕಾರ್ಯಕ್ರಮ


ಕುಂದಾಪುರ: ಸಮಾಜಶಾಸ್ತ್ರ ಚಾವಡಿ ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್‌ಕಟ್ಟೆ  ಹಾಗೂ  ಕುಂದಾಪುರದ ಚೈತನ್ಯ ಸ್ಪೆಶಲ್ ಸ್ಕೂಲ್, ತೆಕ್ಕಟ್ಟೆ ಫ್ರೆಂಡ್ಸ್ ಸಹಯೋಗದೊಂದಿಗೆ ಅಧ್ಯಯನ ಪ್ರವಾಸ ಕಾರ್ಯಕ್ರಮವನ್ನು ಇತ್ತಿಚಿಗೆ ಹಮ್ಮಿಕೊಂಡಿತ್ತು. ತೆಕ್ಕಟ್ಟೆ ಫ್ರೆಂಡ್ಸ್  ಸದಸ್ಯ ಶ್ರೀ ಉದಯ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಚೈತನ್ಯ ವಿಶೇಷ ಶಾಲೆಯ ಮುಖ್ಯ ಶಿಕ್ಷಕಿ ಬಿ. ಲೀಲಾವತಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ರವಿಚಂದ್ರ ಭಂಡಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಖುದ್ಸಿಯಾಭಾನು, ತೆಕ್ಕಟ್ಟೆ ಫ್ರೆಂಡ್ಸ್ ನ ಪ್ರಶಾಂತ ಶೆಟ್ಟಿ  ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಚೈತನ್ಯ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಸಮಾಜಶಾಸ್ತ್ರ ಚಾವಡಿಯ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿ ಹರೀಶ್ ಸ್ವಾಗತಿಸಿ, ಪ್ರಭಾತ್ ವಂದಿಸಿ, ಅಶ್ವಿನಿ ಎ. ಕಾರ್ಯಕ್ರಮ ನಿರೂಪಿಸಿದರು.

ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com