ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ 17ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ


ಕುಂದಾಪುರ: ಡಾ| ಕೋಟ ಶಿವರಾಮ ಕಾರಂತರ ನೆನಪಿನಲ್ಲಿ ಆಯೋಜಿಸುತ್ತಾ ಬಂದಿರುವ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಹದಿನೇಳನೆಯ ಕಾಲೇಜು ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವು ಸುವರ್ಣ ಮಹೋತ್ಸವದ ಸಂಭ್ರದಲ್ಲಿರುವ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಜ.21ರಂದು ಜರುಗಲಿದೆ.  ಕಾಲೇಜಿನ ಡಾ. ಹೆಚ್.ಶಾಂತಾರಾಮ್ ಸಾಹಿತ್ಯ ಮತ್ತು ಸಂಸ್ಕೃತಿ ವೇದಿಕೆ  ಹಾಗೂ ಮಿತ್ರ ಮಂಡಳಿ ಕೋಟ ಇವರ ಸಹಭಾಗಿತ್ವದಲ್ಲಿ ಸಮ್ಮೇಳನ ನಡೆಯಲಿದೆ.
       ಸಮ್ಮೇಳನಾಧ್ಯಕ್ಷತೆಯನ್ನು ಮಂಗಳಗಂಗೋತ್ರಿಯ ಕನ್ನಡ ಅಧ್ಯಯನ ಕೇಂದ್ರದ ದ್ವಿತೀಯ ಎಂ.ಎ. ವಿದ್ಯಾರ್ಥಿ ಶ್ರೇಯಾಂಕ ಎಸ್. ರಾನಡೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕಲಾನಿಕಾಯದ ಡೀನ್ ಪ್ರೊ. ಕೆ.ಅಭಯ್ ಕುಮಾರ್ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಮ್  ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
          ಪ್ರಬಂಧಗೋಷ್ಠಿಯ ಅಧ್ಯಕ್ಷತೆಯನ್ನು ಕಾರ್ಕಳದ ಸರಕಾರಿ ಪ್ರಥಮ ದರ್ಜೆ ಕಾಲೆಜಿನ ತೃತೀಯ ಬಿ.ಬಿ.ಎಂ ವಿದ್ಯಾರ್ಥಿ ಶ್ರೀ ಸಂದೇಶ ಇಂದ್ರ ವಹಿಸಲಿದ್ದಾರೆ. ಭಂಡಾರ್‌ಕಾರ್ಸ್‌ ಕಾಲೇಜಿನ ಕುಮಾರಿ ಶ್ವೇತಾಶ್ರೀ ಮರಳಿ ಮಣ್ಣಿಗೆ ಕಾದಂಬರಿಯಲ್ಲಿ ಕೌಟುಂಬಿಕ ಜೀವನ ಮತ್ತು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಶ್ರೀ ರಾಮಾಂಜಿ ಅವರ ಮರಳಿ ಮಣ್ಣಿಗೆ ಕಾದಂಬರಿಯಲ್ಲಿ ಜಾಗತೀಕರಣ ಎಂಬ ವಿಷಯಗಳ ಕುರಿತು ಪ್ರಬಂಧ ಮಂಡಿಸಲಿದ್ದಾರೆ. ನಂತರ ಕಾರಂತರ ಕುರಿತಾದ ರಸಪ್ರಶ್ನೆಸ್ವರ್ಧೆ ನಡೆಯಲಿದೆ.
       ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇಲ್ಲಿನ ದ್ವಿತೀಯ ಬಿ‌ಎಸ್ಸಿ ವಿದ್ಯಾರ್ಥಿನಿ ಕುಮಾರಿ ಮೈತ್ರೇಯಿ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡಯಲಿದೆ. ಪುತ್ತೂರಿನ ವಿವೇಕಾನಂದ ಕಾಲೇಜಿನ ದ್ವಿತೀಯ ಬಿ.ಎ ವಿದ್ಯಾರ್ಥಿನಿ ಸುಚಿತ್ರಾಕುಮಾರಿ, ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಮಹಾದೇವ ಮಯ್ಯ ಮತ್ತು ಕು.ಮಾರಿ ವಿದ್ಯಾವತಿ, ಡಾ.ಎ.ವಿ.ಬಾಳಿಗ ಕಾಲೇಜು, ಹಾರಾಡಿಯ ಕುಮಾರಿ ಚೈತ್ರ,  ಕಾರ್ಕಳದ ಸರಕಾರಿ ಪ್ರಥಮ ದರ್ಜೆ ಕಾಲೆಜಿನ ತೃತೀಯ ಬಿ.ಬಿ.ಎಂ ವಿದ್ಯಾರ್ಥಿ ಸಂದೇಶ ಇಂದ್ರ ಬಿ.ಜೆ ಮತ್ತು ಮಂಗಳಗಂಗೋತ್ರಿಯ ಕನ್ನಡ ಅಧ್ಯಯನ ಕೇಂದ್ರದ ದ್ವಿತೀಯ ಎಂ.ಎ ವಿದ್ಯಾರ್ಥಿ ಶ್ರೇಯಾಂಕ ಎನ್.ಕಾನಡೆ ಕವಿತೆ ವಾಚಿಸಲಿದ್ದಾರೆ.
        ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ಪ್ರೊ.ಉಪೇಂದ್ರ ಸೋಮಯಾಜಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.


ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com