ಕುಂದಾಪುರ: ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆ ಮತ್ತು ಮಹಾಂಕಾಳಿ ಮಹಿಳಾ ಮಂಡಳಿ ಖಾರ್ವಿಕೇರಿ ಇವರ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ರಾಷ್ಷ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಮತ್ತು ಜಿಲ್ಲಾ ಯುವ ಮಂಡಳಿ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತಿಚಿಗೆ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಸ್ವಾವಿ ವಿವೇಕಾನಂದರು ಸಮಾಜಕ್ಕೆ ಜೀವನಾದರ್ಶವನ್ನು ಭೋದಿಸಿ ಮಹನ್ ವ್ಯಕ್ತಿ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಮನಪರಿವರ್ತಿಸುವ ಮಾತಿನ ವ್ಯಕ್ತಿತ್ವ, ಮಾತುಗಾರಿಕೆ ಅವರದ್ದಾಗಿತ್ತು ಎಂದರು.
ಇದೇ ಸಂದರ್ಭದಲ್ಲಿ ಮೇಲ್ಗಂಗೊಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲಕ್ಕೆ ಜಿಲ್ಲಾ ಯುವ ಮಂಡಳಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ತಾಲೂಕು ಪಂಚಾಯತ್ ಅಧ್ಯಕ್ಷೆ ದೀಪಿಕಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪುರಸಭಾಧ್ಯಕ್ಷ ಮೋಹನ್ದಾಸ್ ಶೆಣೈ, ಕುಂದಾಪುರ ವಲಯ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆಯ ಸಂಚಾಲಕ, ಧರ್ಮಗುರು ಅತಿ ವಂ.ಫಾ.ಅನಿಲ್ ಡಿ’ಸೋಜಾ, ಉದ್ಯಮಿ ಕೆ.ಆರ್.ನ್ಯಾಕ್, ಪ್ರಾಂಶುಪಾಲ ಫಾ.ಪ್ರವೀಣ್ ಅಮೃತ್ ಮಾಟೀಸ್, ನೆಹರು ಯುವ ಕೇಂದ್ರ ಜಿಲ್ಲಾ ಯುವಜನ ಸಮನ್ವಯಧಿಕಾರಿ ಸಿ.ಜೆ.ಎಫ್ .ಡಿ’ಸೋಜ, ಪುರಸಭಾ ಸದಸ್ಯ ರಾಜೇಶ್ ಕಾವೇರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾಣಿ ಗೋಪಾಲ, ಸಂಪನ್ಮೂಲ ವ್ಯಕ್ತಿ ಡಾ.ರಾಜೇಂದ್ರ ಎಸ್ ನಾಯಕ್, ಮಹಾಂಕಾಳಿ ಮಹಿಳಾ ಮಂಡಳಿ ಅಧ್ಯಕ್ಷೆ ಗೀತಾ, ಸಂಪನ್ಮೂಲ ವ್ಯಕ್ತಿ ಡಾ.ರಾಜೇಂದ್ರ ಎಸ್ ನಾಯಕ್ ಸ್ವಾಮಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಫಾ.ಪ್ರವೀಣ್ ಅಮೃತ್ ಮಾಟೀಸ್ ಸ್ವಾಗತಿಸಿದರು.ದೈಹಿಕ ಶಿಕ್ಷಕ ಚಂದ್ರಶೇಖರ ಬೀಜಾಡಿ ನಿರ್ವಹಿಸಿದರು.