ಉಪ್ಪುಂದ: ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯ ಇದರ 18ನೇಯ ವಾರ್ಷಿಕ ಅಧಿವೇಶನ ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಜರುಗಿತು. ಭಾರತೀಯ ಸಂಸ್ಕೃತಿ ಪ್ರತಿಷ್ಠಾನ ಕರ್ನಾಟಕ ಇದರ ಅಧ್ಯಕ್ಷ ರಾಜಶೇಖರ ಹೆಬ್ಬಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಗಣೇಶ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಪರಿಷತ್ತಿನ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ, ನಿವೃತ್ತ ಮ್ಯಾನೇಜರ್ ವೆಂಕಟೇಶ ಮಯ್ಯ, ಗೌರವಾಧ್ಯಕ್ಷ ದೀಟಿ ಸೀತರಾಮ ಮಯ್ಯ, ಯುವ ವೇದಿಕೆ ಅಧ್ಯಕ್ಷ ಸುನೀಲ್ ಕುಮಾರ್ ಹೊಳ್ಳ, ಮಹಿಳಾ ವೇದಿಕೆಯ ಅಧ್ಯಕ್ಷೆ ನಾಗರತ್ನ ಹೆಬ್ಬಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎಸ್. ವಿ. ಪ್ರಕಾಶ್ ಐತಾಳ್ ಕಾರ್ಯಕ್ರಮ ನಿರೂಪಿಸಿ, ಅನ್ನಪೂರ್ಣ ಉಡುಪ ಸ್ವಾಗತಿಸಿ, ಯು. ಸಂದೇಶ್ ಭಟ್ ವಂದಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಉನ್ನತ ಶಿಕ್ಷಣ ಪಡೆಯುತ್ತಿರುವ ೨೫ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬಿ.ಗಣೇಶ ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಅಗಸ್ತೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಉಮೇಶ ಶ್ಯಾನುಭೋಗ, ವೇದಮೂರ್ತಿ ರಾಮಕೃಷ್ಣ ಕಾರಂತ, ದೀಟಿ ಸೀತರಾಮ ಮಯ್ಯ, ನಾಗರತ್ನ ಹೆಬ್ಬಾರ್, ಯು. ಸಂದೇಶ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಜಗದೀಶ್ ಸ್ವಾಗತಿಸಿ, ಪ್ರಕಾಶ್ ಐತಾಳ್ ವಂದಿಸಿದರು. ಕೊನೆಯಲ್ಲಿ ಅಶ್ವಿನಿ ಐತಾಳ್ ಹಾಗೂ ಸ್ವಾತಿ ಭಟ್ ಇವರಿಂದ ಭಕ್ತಿಸುಧೆ ಕಾರ್ಯಕ್ರಮ ನಡೆಯಿತು.
ಕುಂದಾಪ್ರ ಡಾಟ್ ಕಾಂ - editor@kundapra.com