ಸಂಕ್ರಾಂತಿ ಯುವ ಕವಿಗೋಷ್ಠಿ ಅಧ್ಯಕ್ಷರಾಗಿ ಚಂದ್ರ ಕೆ. ಹೆಮ್ಮಾಡಿ ಆಯ್ಕೆ

ಕುಂದಾಪುರ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ಜನವರಿ 24ರಂದು ಮಧ್ಯಾಹ್ನ 2 ಗಂಟೆಗೆ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಸಂಕ್ರಾಂತಿ ಯುವ ಕವಿಗೋಷ್ಠಿಯ ಅಧ್ಯಕ್ಷರಾಗಿ ಯುವಕವಿ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಅವರು ಆಯ್ಕೆಯಾಗಿದ್ದಾರೆ. 
        ನಾಡಿನ ವಿವಿಧ ನಿಯತಕಾಲಿಕಗಳಲ್ಲಿ ಚಂದ್ರ ಅವರ ಕವನ, ಕತೆ ಹಾಗೂ ಲೇಖನಗಳು ಪ್ರಕಟಗೊಂಡಿವೆ. ಮಂಗಳೂರು ಆಕಾಶವಾಣಿಯ ಯುವವಾಣಿಯಲ್ಲಿ ಅವರು ಹಲವು ಬಾರಿ ಕವನಗಳನ್ನು ವಾಚಿಸಿದ್ದಾರೆ. ಖ್ಯಾತ ಲೇಖಕ ದಿ. ವಡ್ಡರ್ಸೆ  ರಘುರಾಮ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕೊಲ್ಲೂರಿನಲ್ಲಿ ನಡೆದ ಕವಿಗೋಷ್ಠಿಯಲ್ಲಿ ಹಾಗೂ ಇತ್ತೀಚೆಗೆ ಬೈಂದೂರಿನಲ್ಲಿ ನಡೆದ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ತಮ್ಮ ಕವನಗಳನ್ನು ವಾಚಿಸಿದ್ದಾರೆ. 
           ಮಿಲಾಗ್ರಿಸ್ ಕಾಲೇಜಿನ ಪ್ರಾಚಾರ್ಯ ಡಾ. ನೇರಿ ಕರ್ನೇಲಿಯೋ ಅವರ ಅಧ್ಯಕ್ಷತೆಯಲ್ಲಿ ಭಾವದೀಪ್ತಿ ಕವನ ಸಂಕಲನ ಬಿಡುಗಡೆಗೊಳ್ಳಲಿದೆ. ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಯು. ಸಿ. ಹೊಳ್ಳ ಅವರು ಕವನಸಂಕಲನ ಬಿಡುಗಡೆಗೊಳಿಸುವರು. ಜಿಲ್ಲೆಯ ಒಟ್ಟು 24 ಯುವಕವಿಗಳು ತಮ್ಮ ಕವನಗಳನ್ನು ವಾಚಿಸುವರು  ಹಾಗೂ 'ಭಾವದೀಪ್ತಿ' ಕವನ ಸಂಕಲನ ಬಿಡುಗಡೆಗೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ತಿಳಿಸಿದ್ದಾರೆ.

 ಕುಂದಾಪ್ರ ಡಾಟ್ ಕಾಂ - editor@kundapra.com

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com