ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣದ ಕೊರತೆ: ಹೊಳ್ಳ

ಮಾರಣಕಟ್ಟೆ: ಇಂದು ಶಿಕ್ಷಣ ಕ್ಷೇತ್ರ ವ್ಯಾಪಾರೀಕರಣಗೊಳ್ಳುತ್ತಿದ್ದು ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಸಿಗುತ್ತಿಲ್ಲ. ಇದರಿಂದ ಯುವಜನತೆ ಭಾರತೀಯ ಸಂಸ್ಕೃತಿಯಿಂದ ವಿಮುಖಗೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಉಪ್ಪುಂದ ಚಂದ್ರಶೇಖರ್ ಹೊಳ್ಳ ಹೇಳಿದರು.
        ಕುಂದಾಪುರ ತಾಲೂಕಿನ ಕೆರಾಡಿ ವರಸಿದ್ಧಿ ವಿನಾಯಕ ಪಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಲಕ್ಷ್ಮೀ ಭಟ್ ಅವರ ಬಿಳ್ಕೋಡುಗೆ ಸಮಾರಂಭದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವಿಸುತ್ತಿಲ್ಲ. ಆದ್ದರಿಂದ ಶಿಕ್ಷಕರು ವಿದ್ಯೆ ಕಲಿಸುವುದರ ಜೊತೆಗೆ ಸಂಸ್ಕಾರವನ್ನು ಭೋಧಿಸಬೇಕು ಎಂದು ತಿಳಿಸಿದರು.
       ಕಾಲೇಜಿನ ಸ್ಥಾಪಕ, ಸಂಚಾಲಕ ಕೆ. ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಪ್ರಭಾಕರ ಆಚಾರ್ಯ, ಮಾಜಿ ಜಿಪಂ ಸದಸ್ಯ ನಾಗಪ್ಪ ಕೊಠಾರಿ, ಸ್ಪೂರ್ತಿ ಸಂಸ್ಥೆಯ ಕೇಶವ ಕೋಟೇಶ್ವರ, ನ್ಯಾಯವಾದಿ ಕೆರಾಡಿ ಪ್ರಸನ್ನ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
         ಕಾಲೇಜಿನ ಪ್ರಾಂಶುಪಾಲ ಎಸ್. ಎಂ. ಗೋಪಾಲಕೃಷ್ಣ ಬೆಳ್ಳಾರೆ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಪ್ರತಾಪ್‌ಚಂದ್ರ ಶೆಟ್ಟಿ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com