ಭಂಡಾರ್ಕಾರ್ಸ್ ಕಾಲೇಜು ಸ್ಫರ್ಧಾ ಉತ್ಸವ


ಕುಂದಾಪುರ: ಇಲ್ಲಿನ ಸುವರ್ಣ ಸಂಭ್ರಮದಲ್ಲಿರುವ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣಾಶಾಸ್ತ್ರ  ವಿಭಾಗವು  ಆಯೋಜಿಸಿದ್ದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಪ್ರಾಯೋಜಿತ ಕಾಲೇಜುಗಳು ಮತ್ತು ಉಡುಪಿ ಜಿಲ್ಲಾ ಕಾಲೇಜುಗಳ ಸ್ಫರ್ಧಾ ಉತ್ಸವ ಇತ್ತಿಚೆಗೆ ಜರುಗಿತು. ಕಾರ್ಯಕ್ರಮವನ್ನು ಉಡುಪಿಯ ಹನುಮಾನ್ ಗ್ರೂಫ್ ಆಫ್ ಎಂಟರಪ್ರೈಸಸ್ ನ ವ್ಯವಸ್ಥಾಪಕ ನಿರ್ದೇಶಕ ವಿಲಾಸ್ ನಾಯಕ್ ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಚಂದ್ರಶೇಖರ ದೋಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತ್ರ  ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ. ಶಾಂತಾರಾಮ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಸರಸ್ವತಿ, ವಿದ್ಯಾರ್ಥಿ ಪ್ರತೀಕ್ ಪೈ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರವೆಂಟಾ ಕಾರ್ಯಕ್ರಮ ನಿರ್ವಹಿಸಿದರು. ರಜನಿ ವಂದಿಸಿರು. 


ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com