ಬೈಂದೂರು: ಸಾಮಾಜಿಕ ವ್ಯವಸ್ಥೆಯಲ್ಲಿ ಅಭಿವೃದ್ಧಿ ಸಾಧಿಸಬೇಕಾದರೆ ಸಂಘಟನೆ ಮುಖ್ಯ. ಸಂಘಟನೆಯ ಮುಖ್ಯ ಉದ್ದೇಶ ಸಾಮಾಜಿಕ ಜಾಗೃತಿಯಾಗಿದೆ. ಇನ್ನೊಂದು ಸಮುದಾಯದ ವಿರುದ್ಧದ ಹೋರಾಟವಲ್ಲ. ಹೀಗಾಗಿ ಸಮುದಾಯ ಸಂಘಟನೆ ಸಾಮಾಜಿಕ ಚಿಂತನೆಗೆ ಸ್ಪಂದಿಸಬೇಕು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.
ಅವರು ಬ್ರಹ್ಮಶ್ರೀ ನಾರಾಯಣಗುರು ಕಲಾ ಮತ್ತು ಕ್ರೀಡಾ ಸಂಘ ಹಾಗೂ ಬಿಲ್ಲವ ಸಮಾಜ ಸೇವಾ ಸಂಘ ಬಿಜೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಬಿಲ್ಲವ ಬಾಂಧವರ ಬೈಂದೂರು ವಲಯ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ ಬಾಂಧವ್ಯ ಟ್ರೋಪಿ _ ೨೦೧೩ನೇ ಉದ್ಘಾಟಿಸಿ ಮಾತನಾಡುತ್ತ ಶಿಕ್ಷಣ ಹಾಗೂ ಸಾಮಾಜಿಕ ಜಾಗೃತಿ ಮನೋಭಾವನೆ ಮೂಡಿದಾಗ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದರು. ಹಿರಿಯ ಪೊಲೀಸ್ ಅಧಿಕಾರಿ ವಿನಾಯಕ ಬಿಲ್ಲವ ಪಂದ್ಯಾಟವನ್ನು ಉದ್ಘಾಟಿಸಿದರು.
ಬೈಂದೂರು ವಲಯ ಬಿಲ್ಲವ ಸಂಘದ ಅಧ್ಯಕ್ಷ ಶ್ರೀನಿವಾಸ ಉಚ್ಚೇರಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ತಾಲೂಕು ಪಂಚಾಯತ್ ಸದಸ್ಯ ರಾಜು ಪೂಜಾರಿ, ಸಂಘದ ಅಧ್ಯಕ್ಷ ಸೋಮಶೇಖರ, ಎಸ್.ಡಿ.ಸಿ.ಸಿ. ಶಾಖಾಧಿಕಾರಿ ಕೃಷ್ಣ ಬಿಲ್ಲವ, ಬೈಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವೆಂಕಟ ಪೂಜಾರಿ, ಹೂವಯ್ಯ ಪೂಜಾರಿ, ಉದ್ಯಮಿ ವೆಂಕಟೇಶ ಪೂಜಾರಿ, ಬಾಬು ಪೂಜಾರಿ, ಪತ್ರಕರ್ತ ಅರುಣ್ ಕುಮಾರ್ ಶಿರೂರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾಪಟು ಶಂಕರ ಕಾಡಿನತಾರು ರವರನ್ನು ಸನ್ಮಾನಿಸಲಾಯಿತು. ಗಣೇಶ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆನಂದ ಪೂಜಾರಿ ಸ್ವಾಗತಿಸಿದರು. ಮಂಜುನಾಥ ಜಿ. ಕಾರ್ಯಕ್ರಮ ನಿರೂಪಿಸಿ, ನರಸಿಂಹ ಪೂಜಾರಿ ಧನ್ಯವಾದಗೈದರು.
ಕುಂದಾಪ್ರ ಡಾಟ್ ಕಾಂ - editor@kundapra.com