ಕುಂದಾಪುರ: ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಅವರ ಮೇಲಿನ ಹಲ್ಲೆಯನ್ನು ಸಿಪಿಐ(ಎಂ) ಬೈಂದೂರು ವಲಯ ಸಮಿತಿ ತೀವ್ರವಾಗಿ ಖಂಡಿಸಿದೆ.
ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ನಿರ್ಭಿತಿಯಿಂದ ಕೆಲಸ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಘಟನೆಗೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಿಬೇಕು. ದೈಹಿಕ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ದುಷ್ಕರ್ಮಿ ಗಳ ಮೇಲೆ ಕ್ರಮಕೈಗೊಳ್ಳಲು ಒತ್ತಾಯಿಸುವ ಪತ್ರಕರ್ತರ ಸಂಘದ ಹೋರಾಟದಲ್ಲಿ ಸಿಪಿಐ(ಎಂ) ಸಕ್ರೀಯವಾಗಿ ಭಾಗವಹಿಸುತ್ತದೆ ಎಂದು ಸಿಪಿಐ(ಎಂ) ಪದಾಧಿಕಾರಿಗಳು ತಿಳಿಸಿದ್ದಾರೆ.