ಕುಂಭಾಶಿ: ಮಂಗಳೂರಿನ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಇಲಾಖೆ ಜಂಟಿ ಆಶ್ರಯದಲ್ಲಿ ಕುಂಭಾಶಿ ವಿನಾಯಕ ಸಭಾಭವನಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು.
ಕುಂಬಾಶಿ ಗ್ರಾಪಂ ಅಧ್ಯಕ್ಷ ಗೋವಿಂದ ಪುತ್ರನ್ ಉದ್ಘಾಟಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅಶೋಕ್ ಅವರು ಏಡ್ಸ್ ನಿಯಂತ್ರಣದ ಬಗ್ಗೆ, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ರಾಮ್ ರಾವ್ ಅವರು ಡಯಾಬಿಟೀಸ್ ಮತ್ತು ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಕೋಟೇಶ್ವರ ಆರೋಗ್ಯಾಧಿಕಾರಿ ಡಾ. ಪೂರ್ಣಿಮಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸತ್ಯನಾರಾಯಣ, ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ವಿ. ಗೌಡ, ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ರಾಜೀವನ್ ಇದ್ದರು.
ಜಿಲ್ಲಾ ವಾರ್ತಾಧಿಕಾರಿ ಎಂ. ಜುಂಜಣ್ಣ ಸ್ವಾಗತಿಸಿದರು, ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಶ್ರೀಕಾಂತ್ ಜಿ.ಜೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ - editor@kundapra.com