ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಗ್ರಾಮದ ಮೀನುಗಾರಿಕಾ ಕೊಂಡಿ ರಸ್ತೆಗಳ ಅಭಿವೃದ್ಧಿ ಹಾಗೂ ದುರಸ್ಥಿ ಕೈಗೊಳ್ಳಲು 15 ಲಕ್ಷ ರೂ. ಅನುದಾನ ಮಂಜೂರಾಗಿದೆ.
ಬೈಂದೂರು ಶಾಸಕ ಕೆ.ಲಕ್ಷ್ಮೀನಾರಾಯಣ ಅವರ ಶಿಫಾರಸ್ಸಿನ ಮೇರೆಗೆ ಬಂದರು ಮತ್ತು ಮೀನುಗಾರಿಕೆ ಇಲಾಖೆಯ 2012-13ನೇ ಸಾಲಿನ ಅನುದಾನದಲ್ಲಿ ಗಂಗೊಳ್ಳಿಯ ಲೈಟ್ಹೌಸ್ ರಸ್ತೆ ಅಭಿವೃದ್ಧಿಗೆ 5 ಲಕ್ಷ, ಗಂಗೊಳ್ಳಿ ಹಳೆ ಐಸ್ ಪ್ಲಾಂಟ್ ಎದುರು ಹಾಳಾದ ರಸ್ತೆಯ ಕಾಂಕ್ರೀಟಿಕರಣ 5 ಲಕ್ಷ ರೂ. ಹಾಗೂ ಚಚರ್್ ರಸ್ತೆ ಕಾಂಕ್ರೀಟಿಕರಣಕ್ಕೆ 5 ಲಕ್ಷ ರೂ. ಅನುದಾನ ಮಂಜೂರಾಗಿದೆ.
ಗಂಗೊಳ್ಳಿ ಭಾಗದ ಮೀನುಗಾರಿಕಾ ರಸ್ತೆಗಳನ್ನು ಕಾಂಕ್ರೀಟಿಕರಣಗೊಳಿಸಿ ಅಭಿವೃದ್ಧಿಪಡಿಸಿರುವುದಲ್ಲದೆ, ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿ ಮೀನುಗಾರಿಕಾ ರಸ್ತೆಗಳ ಅಭಿವೃದ್ಧಿಗೆ ಇನ್ನಷ್ಟು ಅನುದಾನ ಒದಗಿಸಿಕೊಡುವ ಮೂಲಕ ಅಭಿವೃದ್ಧಿಗೆ ಸಹಕರಿಸಿದ ಬೈಂದೂರು ಶಾಸಕ ಕೆ.ಲಕ್ಷ್ಮೀನಾರಾಯಣ ಅವರಿಗೆ ಗಂಗೊಳ್ಳಿ ಬಿಜೆಪಿ ಸ್ಥಾನೀಯ ಸಮಿತಿ ಅಭಿನಂದನೆ ಸಲ್ಲಿಸಿದೆ.
ಕುಂದಾಪ್ರ ಡಾಟ್ ಕಾಂ - editor@kundapra.com