ಇಂದು ಸರ್ಕಾರಿ ಆರೋಗ್ಯ ಸೇವೆ ಬಂದ್


ಕುಂದಾಪುರ: ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದಲ್ಲಿರುವ 10 ಜಿಲ್ಲಾಸ್ಪತ್ರೆಗಳನ್ನು ಆರೋಗ್ಯ ಇಲಾಖೆಗೆ ವಾಪಾಸು ನೀಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಗಳೂರಿನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಉಡುಪಿ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ ವ್ಯಕ್ತಪಡಿಸಿದೆ.
        ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಉಪವಾಸ ಸತ್ಯಾಗ್ರಹಕ್ಕೆ ಉಡುಪಿ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳು ಭಾಗವಹಿಸುವ ಸಲುವಾಗಿ ಈ ದಿನ ಉಡುಪಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ನಾಗೇಶ ಗುಂಡ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com