ಬೈಂದೂರು: ಉದ್ಯಮಿ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಬಿ.ಎಂ. ಸುಕುಮಾರ ಶೆಟ್ಟಿ ಅವರು ಶುಕ್ರವಾರ ಬೈಂದೂರು ಶಾಸಕ ಕೆ. ಲಕ್ಷ್ಮಿನಾರಾಯಣ ಹಾಗೂ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಅಧೀಕೃತವಾಗಿ ಸೇರ್ಪಡೆಗೊಂಡರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಉದಯಕುಮಾರ್ ಶೆಟ್ಟಿ ಅವರು ಸುಕುಮಾರ್ ಶೆಟ್ಟಿ ಅವರಿಗೆ ಪಕ್ಷದ ಧ್ವಜ ನೀಡಿ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಬಿ.ಎಂ. ಸುಕುಮಾರ್ ಶೆಟ್ಟಿ, ಕಳೆದ 20 ವರ್ಷಗಳಿಂದ ಯಾವುದೇ ರಾಜಕೀಯ ಪಕ್ಷದೊಂದಿಗೆ ನೇರವಾಗಿ ಗುರುತಿಸಿಕೊಳ್ಳದೆ ಇದ್ದರೂ ಚುನಾವಣೆ ಸಂದರ್ಭ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತಾ ಬಂದಿದ್ದೇನೆ. ಆದರೆ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳ ಕಾರ್ಯವೈಖರಿಗೆ ಆಕರ್ಷಿತನಾಗಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದೇನೆ. ಬಿಜೆಪಿಯನ್ನು ಬೈಂದೂರು ಕ್ಷೇತ್ರ ಮತ್ತು ಕುಂದಾಪುರ ತಾಲೂಕಿನಲ್ಲಿ ಬಲಪಡಿಸಲು ಶಕ್ತಿ ಮೀರಿ ಯತ್ನಿಸುವುದಾಗಿ ಅವರು ಹೇಳಿದರು.
ಬಿ.ಎಂ. ಸುಕುಮಾರ್ ಶೆಟ್ಟಿ ಬಿಜೆಪಿ ಸೇರ್ಪಡೆಯನ್ನು ಸ್ವಾಗತಿಸಿದ ಬೈಂದೂರು ಶಾಸಕ ಕೆ. ಲಕ್ಷ್ಮಿ¾àನಾರಾಯಣ ಅವರು, ಶೆಟ್ಟಿ ಅವರು ಪಕ್ಷಕ್ಕೆ ಆಗಮಿಸಿರುವುದರಿಂದ ಪಕ್ಷ ಶಕ್ತಿಯುತವಾಗಿ ಬೆಳೆಯಲು ಸಹಕಾರಿ ಎಂದರು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಉದಯಕುಮಾರ್ ಶೆಟ್ಟಿ ಮಾತನಾಡಿ, ಪ್ರಭಾವಿ ಮುಖಂಡ ಸುಕುಮಾರ್ ಶೆಟ್ಟಿಯವರ ಬಿಜೆಪಿ ಸೇರ್ಪಡೆಯಿಂದ ಪಕ್ಷದ ಕಿರೀಟಕ್ಕೆ ಇನ್ನೊಂದು ಗರಿ ಸೇರಿದಂತಾಗಿದೆ. ಪಕ್ಷವನ್ನು ಮತ್ತಷ್ಟು ಬಲಗೊಳಿಸುವ ಉದ್ದೇಶದಿಂದ ಎಲ್ಲರೂ ಪಕ್ಷ ಸಂಘಟನೆಯಲ್ಲಿ ಒಟ್ಟಾಗಿ ತೊಡಗಿಕೊಳ್ಳಬೇಕು ಎಂದರು.
ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಸದಾಶಿವ ಡಿ. ಬಿಜೂರು, ಕ್ಷೇತ್ರ ಯುವಮೋರ್ಚಾ ಅಧ್ಯಕ್ಷ ವೀರಭದ್ರ ಶೆಟ್ಟಿ, ಪ್ರೊ| ಎ.ಪಿ. ಮಿತ್ತಾಂತಾಯ, ಸುರೇಂದ್ರ ಶೆಟ್ಟಿ, ಸುರೇಶ ಬಿಜೂರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು, ಸುಕುಮಾರ್ ಶೆಟ್ಟಿ ಅಭಿಮಾನಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ - editor@kundapra.com