ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಲಕ್ಷ ಬಿಲ್ವಾರ್ಚನೆ


 ಕುಂದಾಪುರ : ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಶ್ರೀದೇವರ ಪ್ರತಿಷ್ಠಾ ದಶಮಾನೋತ್ಸವದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ಲಕ್ಷ ಬಿಲ್ವಾರ್ಚನೆ ಸೇವೆ ಇಂದು (ಫೆ.14) ಹೊಸನಗರ ಮೂಲೆಗದ್ದೆ ಶ್ರೀ ಸದಾನಂದಾಶ್ರಮದ ಮ|ನಿ|ಪ್ರ| ಸಿದ್ಧಲಿಂಗ ಮಹಾಸ್ವಾಮಿ ಮತ್ತು ಸಾಗರ ತಾಳಗುಪ್ಪ ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ಮ|ನಿ|ಪ್ರ| ವಿದ್ವಾನ್ ಸಿದ್ಧವೀರ ಮಹಾಸ್ವಾಮಿಗಳು ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ.
ಮಧ್ಯಾಹ್ನ 1 ಗಂಟೆಗೆ ನಡೆಯಲಿರು ಧರ್ಮ ಸಭಾ ಕಾರ್ಯಕ್ರಮವನ್ನು ಹೊಸನಗರ ಮೂಲೆಗದ್ದೆ ಶ್ರೀ ಸದಾನಂದಾಶ್ರಮದ ಮ|ನಿ|ಪ್ರ| ಸಿದ್ಧಲಿಂಗ ಮಹಾಸ್ವಾಮೀಜಿಯವರು ಉದ್ಘಾಟಿಸಲಿದ್ದು, ಸಾಗರ ತಾಳಗುಪ್ಪ ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ಮ|ನಿ|ಪ್ರ| ವಿದ್ವಾನ್ ಸಿದ್ಧವೀರ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ರಾಜ್ಯದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಬಿ.ಅಪ್ಪಣ್ಣ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ಅಮ್ಮನವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಡಾ| ನಿ.ಬೀ.ವಿಜಯ ಬಲ್ಲಾಳ್, ಸಾಂಸದ ಬಿ.ವೈ.ರಾಘವೇಂದ್ರ, ಬೈಂದೂರು ಶಾಸಕ ಕೆ.ಲಕ್ಷ್ಮೀನಾರಾಯಣ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.


ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com