ಕೊಲ್ಲೂರು: ರಾಜ್ಯದಲ್ಲಿ ಬಿಜೆಪಿ ಪ್ರಬಲವಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಯಡಿಯೂರಪ್ಪ ಅವರ ಕೆಜೆಪಿ ಪಕ್ಷದಿಂದ ಬಿಜೆಪಿಗೆ ಯಾವುದೇ ಹೊಡೆತವಿಲ್ಲ, ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಹಾಗೂ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕುಟುಂಬ ಸಮೇತ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಅವರು, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದು ನನ್ನ ಖಾಸಗಿ ಭೇಟಿಯಾಗಿದ್ದು, ಚುನಾವಣೆಯ ಮುನ್ನ ದೇವಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ಪ್ರಸ್ತುತ ರಾಜಕಾರಣದ ಬಗ್ಗೆ ಏನನ್ನೂ ಹೇಳಲು ಇಷ್ಟಪಡುವುದಿಲ್ಲ ಎಂದರು.
ಕುಂದಾಪ್ರ ಡಾಟ್ ಕಾಂ - editor@kundapra.com