ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾದ ಪ್ರಸನ್ನ ಕುಮಾರ್ ಹಾಗೂ ಗೌರಿ ದೇವಾಡಿಗ ಇವರ ಅಮಾನತನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ. ಉದಯಕುಮಾರ್ ಶೆಟ್ಟಿ ರದ್ದುಗೊಳಿಸಿದ್ದಾರೆ. ಪ್ರಸನ್ನ ಕುಮಾರ್ ಮತ್ತು ಗೌರಿ ದೇವಾಡಿಗ ಅವರು ಬಿಜೆಪಿಯ ಮಾಜಿ ಶಾಸಕ, ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಬೆಂಬಲ ನೀಡಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿ ಅವರಿಬ್ಬರನ್ನೂ ಬಿಜೆಪಿಯಿಂದ ಅಮಾನತುಗೊಳಿಸಲಾಗಿತ್ತು. ಅದರ ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅವರಿಬ್ಬರ ಅಮಾನತನ್ನು ರದ್ದುಗೊಳಿಸಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಪ್ರಣಯ್ ಕುಮಾರ್ ಅವರ ಶಿಫಾರಸಿನ ಮೇರೆಗೆ ಜಿಲ್ಲಾಧ್ಯಕ್ಷರು ಈ ಆದೇಶ ಹೊರಡಿಸಿದ್ದಾರೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ - editor@kundapra.com