ಕುಂದಾಪುರ: ತಾಲೂಕು ಯುವ ಬಂಟರ ಸಂಘ ದಿ.15 ರಂದು ಇಲ್ಲಿನ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಉದ್ಘಾಟನೆಗೊಳ್ಳಲಿದೆ. ಇದೇ ಸಂದರ್ಭ ನೂತನ ಪದಾಧಿಕಾರಿಗಳ ಪದಗ್ರಹಣವೂ ನಡೆಯಲಿದೆ.
ಉದ್ಘಾಟನೆಯ ಪೂರ್ವಭಾವಿಯಾಗಿ ಅವತ್ತು ಕುಂದೇಶ್ವರ ದೇವಸ್ಥಾನದಿಂದ ಆರಂಭಗೊಂಡು ಹೊಸ ಬಸ್ಸು ನಿಲ್ದಾಣದ ಮೂಲಕ ಆರ್.ಎನ್.ಶೆಟ್ಟಿ ಸಭಾಭವನಕ್ಕೆ ದ್ವಿಚಕ್ರ ವಾಹನ ಮತ್ತು ಕಾರುಗಳ ವಾಹನ ಮೆರವಣಿಗೆ ನಡೆಯಲಿದೆ. ಸಂಜೆ ಗಂಟೆ 4ಕ್ಕೆ ಸರಿಯಾಗಿ ಯುವ ಬಂಟರ ಸಂಘದ ಉದ್ಘಾಟನೆ ನಡೆಯಲಿದೆ. ಯುವ ಬಂಟರ ಸಂಘವನ್ನು ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಮಂಗಳೂರು ಇದರ ಅಧ್ಯಕ್ಷರಾದ ಕೆ.ಅಮರನಾಥ ಶೆಟ್ಟಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ಇದರ ಸಂಚಾಲಕರಾದ ಡಾ|ವೈ.ಎಸ್.ಹೆಗ್ಡೆ ವಹಿಸಲಿದ್ದು, ಭಾರ್ಗವಬೀಡು ಬಂಟರ ಮಹಾಸಂಸ್ಥಾನದ ಪೀಠಾಧಿಪತಿಗಳಾದ ವಿದ್ಯಾವಾಚಸ್ಪತಿ ಶ್ರೀ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ.ಬಾಲಕೃಷ್ಣ ಶೆಟ್ಟಿ ಆಶಯ ನುಡಿಗಳನ್ನಾಡಲಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ, ಉಡುಪಿ ಯುವ ಬಂಟರ ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮುಂಬೈ ಥಾಣೆ ವರ್ತಕ ನಗರದ ಕನ್ನಡ ಸಂಘದ ಅಧ್ಯಕ್ಷ ರತ್ನಾಕರ ಜಿ.ಶೆಟ್ಟಿ ಭಾಗವಹಿಸಲಿದ್ದಾರೆ. ಕುಂದಾಪುರ ತಾಲೂಕು ಬಂಟರ ಸಂಘದ ಅಧ್ಯಕ್ಷ ಬಾಂಡ್ಯ ಸುಧಾಕರ ಶೆಟ್ಟಿ, ಬೈಂದೂರು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷ ಅಭಿನಂದನ ಶೆಟ್ಟಿ ಆಗಮಿಸಲಿದ್ದಾರೆ.
ಸಂಘದ ಉದ್ಘಾಟನಾ ಸಮಾರಂಭದ ಶುಭ ಸಂದರ್ಭದಲ್ಲಿ ವಿವಿಧ ದತ್ತಿ ನಿಧಿಗಳಿಗೆ ಉದಾರ ಧನ ಸಹಾಯ ನೀಡಿದ ದಾನಿಗಳನ್ನು ಸನ್ಮಾನಿಸಿ, ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಸಮಾಜದ ವೃತ್ತಿಪರ ಕಲಾವಿದರಿಂದ ಯಕ್ಷೊತ್ಸವ ಭೀಷ್ಮ ಪ್ರತಿಜ್ಞೆ ನಡೆಯಲಿದೆ
ಕುಂದಾಪ್ರ ಡಾಟ್ ಕಾಂ - editor@kundapra.com