ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿರುವ ತಾಲ್ಲೂಕಿನ ಅಮಾಸೆಬೈಲ್ ಸಮೀಪದ ಹಣೆಜಡ್ಡಿನ ನವೀನ್ಚಂದ್ರ ಶೆಟ್ಟಿಯವರನ್ನು ಕಾಂಗ್ರೆಸ್ನ ರಾಜ್ಯ ಚುನಾವಣಾ ಪ್ರಚಾರ ಸಭೆಯ ಸದಸ್ಯರನ್ನಾಗಿ ನಿಯುಕ್ತಿಗೊಳಿಸಿ ಸಮಿತಿಯ ಅಧ್ಯಕ್ಷ ವೀರಣ್ಣ ಮತ್ತಿಕಟ್ಟೆ ಆದೇಶಿಸಿದ್ದಾರೆ.
ಕೇಂದ್ರದ ಗ್ರಾಮೀಣಾಭಿವೃದ್ದಿ ಬ್ಯಾಂಕಿನ ನಿರ್ದೇಶಕರಾಗಿರುವ ಅವರು ಈ ಬಾರಿಯ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಕಾಂಕ್ಷಿಯಾಗಿದ್ದರು.