ಕುಂದಾಪುರ: ಮಾನವನ ಸಾವಿನ ನಂತರ ಕಣ್ಣುಗಳು ಸುಟ್ಟು ಬೂದಿಯಾಗುವ ಬದಲು ನೇತ್ರದಾನದ ಮೂಲಕ ಅಂಧರಿಗೆ ಬೆಳಕನ್ನು ನೀಡುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ. ನಾಗೇಶ್ ಗುಂಡ್ಮಿ ಹೇಳಿದ್ದಾರೆ.
ಭಾನುವಾರ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಬೀಜಾಡಿ ಗೋಪಾಡಿ ಮಿತ್ರ ಸಂಗಮ ಆಶ್ರಯದಲ್ಲಿ ಕೋಟ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ, ಬ್ರಹ್ಮಾವರ ಬಾರ್ಕೂರು ಲಯನ್ಸ್ ಕ್ಲಬ್ನ ಲಯನ್ಸ್ ಟ್ರಸ್ಟ್ಮತ್ತು ಚಾರಿಟೀಸ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಅಂಧತ್ವ ನಿವಾರಣಾ ವಿಭಾಗ, ಬ್ರಹ್ಮಾವರ- ಬಾರ್ಕೂರು ಲಯನ್ಸ್ ಮತ್ತು ಲಯನೆಸ್ ಕ್ಲಬ್ ಸಹಯೋಗದಲ್ಲಿ ಬೀಜಾಡಿ ಮಿತ್ರ ಸೌಧದಲ್ಲಿ ಜರುಗಿದ ಬೃಹತ್ ನೇತ್ರದಾನ ಶಿಬಿರ ಮತ್ತು ಕಣ್ಣಿನ ಪೊರೆ ಉಚಿತ ತಪಾಸಣಾ ಶಿಬಿರ ಹಾಗೂ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬ್ರಹ್ಮಾವರ- ಬಾರ್ಕೂರು ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಕೃಷ್ಣಯ್ಯ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೋಟ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ ಡಾ.ಅಜಿತ್, ಕುಂದಾಪುರ ಆಳ್ವಾಸ್ ನುಡಿಸಿರಿ ಘಟಕದ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಬ್ರಹ್ಮಾವರ- ಬಾರ್ಕೂರು ಲಯನ್ಸ್ ಕ್ಲಬ್ ಕಾರ್ಯದರ್ಶಿ ಜಿ.ಬಾಲಕೃಷ್ಣ ಶೆಟ್ಟಿ, ಬ್ರಹ್ಮಾವರ- ಬಾರ್ಕೂರು ಲಯನೆಸ್ ಕ್ಲಬ್ ಅಧ್ಯಕ್ಷೆ ದೇವಕಿ ಕೆ. ಶೆಟ್ಟಿ, ಮಿತ್ರ ಸಂಗಮದ ಕಾರ್ಯದರ್ಶಿ ಪ್ರದೀಪ್ ದೇವಾಡಿಗ ಇದ್ದರು.
ಇದೇ ಸಂದರ್ಭ ಒಟ್ಟು 65 ಮಂದಿ ನೇತ್ರದಾನ ಮಾಡಿದರು.75 ಮಂದಿ ಫಲನುಭವಿಗಳೂ ಕಣ್ಣಿನ ಪೂರೆ ಉಚಿತ ತಪಾಸಣಾ ಶಿಬಿರದಲ್ಲಿ ಪಲ್ಗೂಂಡರು. ಮಿತ್ರ ಸಂಗಮದ ಗೌರವಾಧ್ಯಕ್ಷ ವಾದಿರಾಜ್ ಹೆಬ್ಬಾರ್ ಸ್ವಾಗತಿಸಿದರು. ಅಧ್ಯಕ್ಷ ರಾಜೇಶ ಆಚಾರ್ಯ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ - editor@kundapra.com