ಬೃಹತ್ ಕಾಂಗ್ರೆಸ್ ಸಮಾವೇಶ

ಬೈಂದೂರು: ರಾಜ್ಯದಲ್ಲಿ ಕಳೆದ 5 ವರ್ಷ ಬಿಜೆಪಿಯ ಅಧಿಕಾರವಧಿಯಲ್ಲಿ ಜನಸಾಮಾನ್ಯರು, ರೈತರು, ಕೂಲಿಕಾರ್ಮಿಕರು, ಮಹಿಳೆಯರು ಬವಣೆ ಪಡುತ್ತಿದ್ದಾರೆ. ಕಾಂಗ್ರೆಸ್ ಕಾರ್‍ಯಕರ್ತರು ಹೊಸ ಹುರುಪಿನಿಂದ ಪಕ್ಷವನ್ನು ಅಧಿಕಾರಕ್ಕೆ ತಂದು ರಾಜ್ಯವನ್ನು ಮಗದೊಮ್ಮೆ ಪ್ರಗತಿಪಥದತ್ತ ಸಾಗಿಸಿ, ರಾಜ್ಯವನ್ನು ವೈಭವದತ್ತ ಕೊಂಡೊಯ್ಯುವ ಮೂಲಕ ದೇಶದಲ್ಲಿ ಪ್ರಥಮ ಸ್ಥಾನಕ್ಕೆ ತಲುಪಿಸುವ ಜವಾಬ್ದಾರಿ ಕಾಂಗ್ರೆಸ್ ಕಾರ್‍ಯಕರ್ತರ ಮೇಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಎ‌ಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್ ಹೇಳಿದರು.
     ಬ್ಲಾಕ್ ಕಾಂಗ್ರೆಸ್ ಸಮಿತಿ ಬೈಂದೂರು ಮತ್ತು ವಂಡ್ಸೆ ಇದರ ಜಂಟಿ ಆಶ್ರಯದಲ್ಲಿ ಇಲ್ಲಿನ ಜೆ.ಎನ್. ಆರ್. ಕಲಾ ಮಂದಿರದಲಿ ಭಾನುವಾರ ನಡೆದ ಬೃಹತ್ ಕಾಂಗ್ರೆಸ್ ಕಾರ್‍ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
    ವಿಶೇಷ ಆಹ್ವಾನಿತರಾಗಿ ಆಗಮಿಸಿದ ಮಂಗಳೂರು ನವೋದಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ ಮಾತನಾಡಿ, ರಾಜ್ಯದಲ್ಲಿ ಬದಲಾವಣೆಯ ನೆಲೆಯಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯ ಮುಖ್ಯಮಂತ್ರಿಯನ್ನು ರಾಜ್ಯದ ಜನ ಕಂಬಿಯ ಹಿಂದೆ ಕಾಣಬೇಕಾಗಿ ಬಂದಿರುವುದು ಜನರ ದುರ್ದೈವವಾಗಿದೆ. ಬಿಜೆಪಿ ನಾಯಕರಿಗೆ ಈಗ ತಪ್ಪಿನ ಅರಿವಾಗಿದೆ, ಅವರ ತಪ್ಪಿಗೆ ಶಿಕ್ಷೆ ಆಗಲೇಬೇಕಾಗಿದ್ದು, ಅವರನ್ನು ಮತದಾರರು ಮನೆಗೆ ಕಳುಹಿಸಿ ಎಂದು ಕರೆ ನೀಡಿದರು. ವಿಧಾನ ಪರಿಷತ್ತ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಪ್ರತಾಪಶ್ಚಂದ್ರ ಶೆಟ್ಟಿ ಅಧ್ಕಕ್ಷತೆ ವಹಿಸಿದ್ದರು. 
      ತ್ರಾಸಿಯಿಂದ ಬೈಂದೂರುವರೆಗೆ ಯುವ ಕಾಂಗ್ರೆಸ್‌ನ ಬೈಕ್ ರ್‍ಯಾಲಿಯನ್ನು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತ್ರಾಸಿಯಲ್ಲಿ ಉದ್ಘಾಟಿಸಿದರು. 
       ಉಡುಪಿ ಚಿಕ್ಕಮಂಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಜಯಪ್ರಕಾಶ ಹೆಗ್ಡೆ, ಕೆಪಿಸಿಸಿ ಕಾರ್ಯದರ್ಶಿ ಎಂ. ಎ. ಗಫೂರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್, ಉಪಾಧ್ಯಕ್ಷ ಅಮೃತ್ ಶೆಣೈ, ಬೈಂದೂರು ಬ್ಲಾಕ್ ಕಾಂಗ್ರಸ್ ಅಧ್ಯಕ್ಷ ರಮೇಶ ಗಾಣಿಗ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪಿಗೆ ಹಾಡಿ ಸಂಜೀವ ಶೆಟ್ಟಿ, ಕೆಪಿಸಿಸಿ ಸದಸ್ಯರಾದ ರಘುರಾಮ ಶೆಟ್ಟಿ, ಮಂಜಯ್ಯ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ರಾಜು ಪೂಜಾರಿ, ರಾಜು ದೇವಾಡಿಗ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ ಉಪಸ್ಥಿತರಿದ್ದರು.
      ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸ್ವಾಗತಿಸಿ, ವಾಸುದೇವ ಯಡಿಯಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಕುಂದಾಪ್ರ ಡಾಟ್ ಕಾಂ - editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com