ಕುಂದಾಪುರ: ಕರ್ನಾಟಕ ರಾಜ್ಯದ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಪತ್ನಿ ಸಮೇತರಾಗಿ ಕೊಲ್ಲೂರಿಗೆ ಆಗಮಿಸಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ದೇವಿಯ ಪರಮಭಕ್ತರಾದ ಇವರು ಈ ಕ್ಷೇತ್ರಕ್ಕೆ ಮೊದಲ ಬಾರಿ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಡಾ. ಅತುಲ್ಕುಮಾರ್ ಶೆಟ್ಟಿ, ಶ್ರೀನಿವಾಸ ಕಲ್ಲೂರಾಯ, ಅಧೀಕ್ಷಕ ರಾಮಕೃಷ್ಣ ಅಡಿಗ ಇವರನ್ನು ದೇವಸ್ಥಾನಕ್ಕೆ ಬರಮಾಡಿಕೊಂಡರು. ಉಪಲೋಕಾಯುಕ್ತ ಸುಭಾಸ್ ಅಡಿ, ಉಡುಪಿ ಲೋಕಾಯುಕ್ತ ಪೋಲೀಸ್ ನಿರೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಜೋತೆಗಿದ್ದರು
ಕುಂದಾಪ್ರ ಡಾಟ್ ಕಾಂ - editor@kundapra.com