ಕುಂದಾಪುರ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿಯಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಆರಂಭಿಸಿದ್ದು, ಗ್ರಾಮದ ಪ್ರತಿಯೊಂದು ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಬೈಂದೂರು ಬಿಜೆಪಿ ಅಭ್ಯರ್ಥಿ ಬಿ.ಎಂ.ಸುಕುಮಾರ್ ಶೆಟ್ಟಿ ಹಾಗೂ ಶಾಸಕ ಕೆ.ಲಕ್ಷ್ಮೀನಾರಾಯಣ ಮತ್ತು ಪಕ್ಷದ ಮುಖಂಡರು ಗಂಗೊಳ್ಳಿಯ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಮಲ್ಯರಬೆಟ್ಟು, ಬೇಲಿಕೇರಿ, ದೊಡ್ಡಹಿತ್ಲು, ಇಂದುಧರ ದೇವಸ್ಥಾನ, ಮ್ಯಾಂಗನೀಸ್ ರಸ್ತೆ, ಗುಡ್ಡೆಕೇರಿ, ಖಾರ್ವಿಕೇರಿ, ದಾಕುಹಿತ್ಲು ಮೊದಲಾದ ಕಡೆಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ನಾಯಕರು, ಯಾವುದೇ ಆಸೆ ಆಮಿಷ, ಅಪಪ್ರಚಾರಗಳಿಗೆ ಬಲಿಯಾಗದೆ, ಸರಕಾರದ ಸಾಧನೆ, ಅಭಿವೃದ್ಧಿಯನ್ನು ನೋಡಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ರಚನೆಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಸ್ಥಾನೀಯ ಸಮಿತಿ ಅಧ್ಯಕ್ಷ ಶಿವಾನಂದ ನಾಯ್ಕ್, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಖಾರ್ವಿ, ಸ್ಥಾನೀಯ ಸಮಿತಿ ಕಾರ್ಯದರ್ಶಿ ಮಹೇಶ ಪೂಜಾರಿ ಸ್ಥಾನೀಯ ಸಮಿತಿ ಮಾಜಿ ಅಧ್ಯಕ್ಷ ರಾಮಪ್ಪ ಖಾರ್ವಿ, ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು ಪ್ರಚಾರದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ - editor@kundapra.com