ಬೆಂಗಳೂರು: ರಾಜ್ಯ ಅರಣ್ಯ ಇಲಾಖೆಯು ಅರಣ್ಯ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಯಂತಹ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಂದ ಪ್ರಸಕ್ತ ಸಾಲಿನ 'ರಾಜ್ಯ ಪರಿಸರ' ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ಪರಿಸರ ಪ್ರಶಸ್ತಿ ಜೊತೆಗೆ ತಲಾ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಹರು ಮೇ 30 ರೊಳಗೆ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಕೊಠಡಿ ಸಂಖ್ಯೆ 704, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು -1 ಈ ವಿಳಾಸಕ್ಕೆ ಸ್ವವಿವರಗಳೊಂದಿಗೆ ಕೂಡಿದ ಅರ್ಜಿ ಸಲ್ಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಅಥವಾ www.parisara.kar.nic.in ಗೆ ಸಂಪರ್ಕಿಸಬಹುದು.
ಕುಂದಾಪ್ರ ಡಾಟ್ ಕಾಂ - editor@kundapra.com