ಕಿರಿಮಂಜೇಶ್ವರ: ಕಿರಿಮಂಜೇಶ್ವರದ ಶುಭದಾ ಎಜ್ಯುಕೇಶನ್ ಟ್ರಸ್ಟ್ನ ಆಡಳಿತದ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ನೂತನ ಪ್ರಾಂಶುಪಾಲರಾಗಿ ಎಚ್. ಎನ್. ಐತಾಳ್ ಅವರು ನೇಮಕಗೊಂಡಿದ್ದಾರೆ. ಹಂಗಾರಕಟ್ಟೆಯ ಚೇತನಾ ಪ್ರೌಢಶಾಲಾ ಶಿಕ್ಷಕರಾಗಿ, ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕರಾಗಿ ಹಾಗೂ ಎಸ್. ವಿ. ಪದವಿಪೂರ್ವ ಕಾಲೇಜಿನಲ್ಲಿ ಆಂಗ್ಲಭಾಷಾ ಉಪನ್ಯಾಸಕರಾಗಿ ಅವರು ಸೇವೆ ಸಲ್ಲಿಸಿರುತ್ತಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ
ಕುಂದಾಪ್ರ ಡಾಟ್ ಕಾಂ - editor@kundapra.com