ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೂತನ ಸಚಿವ ಸಂಪುಟದಲ್ಲಿ ಕರಾವಳಿಯ ಉಭಯ ಜಿಲ್ಲೆಗಳಿಗೆ ಉತ್ತಮ ಪ್ರಾತಿನಿಧ್ಯ ಸಿಕ್ಕಿದೆ. ಕಾಪು ಕ್ಷೇತ್ರದ ಶಾಸಕ ವಿನಯಕುಮಾರ್ ಸೊರಕೆ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಯು.ಟಿ. ಖಾದರ್, ಬಂಟ್ವಾಳ ಕ್ಷೇತ್ರದ ಶಾಸಕ ರಮಾನಾಥ ರೈ ಮತ್ತು ಮೂಡಬಿದಿರೆ ಶಾಸಕ ಅಭಯಚಂದ್ರ ಜೈನ್ ಅವರು ಸಚಿವ ಸ್ಥಾನವನ್ನು ಪಡೆದಿದ್ದಾರೆ.
ಶನಿವಾರ ಬೆಳಗ್ಗೆ 10.30ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರು ಸಿದ್ಧರಾಮಯ್ಯ ಸಂಪುಟದ 28 ಶಾಸಕರಿಗೆ ಪ್ರಮಾಣ ವಚನವನ್ನು ಬೋಧಿಸಿದರು. ಈ ಪೈಕಿ 20 ಮಂದಿ ಸಂಪುಟ ದರ್ಜೆಯ ಸಚಿವರಾಗಿದ್ದು ಉಳಿದಂತೆ 8 ಮಂದಿ ರಾಜ್ಯ ಸಚಿವರು (ಸಹಾಯಕ ಸಚಿವರು) ಆಗಿದ್ದಾರೆ.
ಕುಂದಾಪ್ರ ಡಾಟ್ ಕಾಂ - editor@kundapra.com