ಅವರು ಬೀಜಾಡಿ ಮಿತ್ರಸೌಧದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಕುರಿತಾದ ಕರಪತ್ರ ಮತ್ತು ಬ್ಯಾನರ್ನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೇ ನಿರ್ಭೀತಿಯಿಂದ ಮತಚಲಾಯಿಸುವಂತೆ ಅರಿವನ್ನು ಮೂಡಿಸಲು ಇಂತಹ ಜಾಗೃತಿ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿತ್ರಸಂಗಮದ ಅಧ್ಯಕ್ಷ ರಾಜೇಶ್ ಆಚಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ನೆಹರೂ ಯುವ ಕೇಂದ್ರದ ಸಂಚಾಲಕ ನರಸಿಂಹ ಗಾಣಿಗ, ಸಂಸ್ಥೆಯ ಗೌರವಾಧ್ಯಕ್ಷ ವಾದಿರಾಜ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿ ಪ್ರದೀಪ ದೇವಾಡಿಗ, ಬೀಜಾಡಿ ಮೂಡುಶಾಲಾ ಶಾಲಾಭಿವೃದ್ದಿ ಸಮಿತಿಯ ಸದಸ್ಯ ನಾರಾಯಣ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ - editor@kundapra.com