ಬೆಂಗಳೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ಪ್ರಸಕ್ತ ಸಾಲಿನ 'ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೊಮೋ ಪದವಿ'ಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಶಿಕ್ಷಣದ ಜೊತೆಗೆ 400 ರಿಂದ 500 ರೂ. ವಿದ್ಯಾರ್ಥಿ ವೇತನ ನೀಡಲಾಗುವುದು. ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ಅನ್ನು ಭಾಷಾ ವಿಷಯವಾಗಿ ಅಧ್ಯಯನ ಮಾಡಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ದೂ. 22485690 ಗೆ ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ- 582102 ಇಲ್ಲಿಗೆ ಭೇಟಿ ನೀಡಬಹುದು.
ಕುಂದಾಪ್ರ ಡಾಟ್ ಕಾಂ - editor@kundapra.com