ಬೆಳಗ್ಗೆ ಶ್ರೀ ದೇವಿಯ ದರ್ಶನ ಪಡೆದ ಅನಂತರ ಶ್ರೀ ವೀರಭದ್ರ ದೇವರಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕೊಲ್ಲೂರಿನ ಮೂಲ ಸೌಕರ್ಯಗಳಾದ ಒಳಚರಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಇಲಾಖೆಯ ಅಧಿಕಾರಿಗಳೊಡನೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ತಾನು ಚುನಾವಣೆಗೆ ಸ್ಪರ್ಧಿಸುವ ಮೊದಲು ದೇವಿಯ ಆಶೀರ್ವಾದ ಪಡೆದಿದ್ದೆ. ತನ್ನ ಗೆಲುವಿಗೆ ಹಾಗೂ ಸಚಿವನಾಗಲು ಮೂಕಾಂಬಿಕೆಯ ಆಶೀರ್ವಾದ ಕಾರಣ ಎಂದ ಅವರು
ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರೊಡನೆ ಚರ್ಚಿಸಿ ಆ ಮೂಲಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದಾಗಿ ಅವರು ತಿಳಿಸಿದರು.
ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ನಡೆಸಿಲ್ಲ. ಕೇಂದ್ರದ ಮುಖಂಡರು ಹಾಗೂ ರಾಜ್ಯದ ವರಿಷ್ಠರು ಆ ಸ್ಥಾನ ನೀಡಿದ್ದಾರೆ. ಸಂತೋಷದಿಂದ ಸ್ವೀಕರಿಸಿದ್ದು, ಸಿದ್ಧರಾಮಯ್ಯನವರ ನೇತೃತ್ವದ ಸರಕಾರದಲ್ಲಿ ಪ್ರಾಮಾಣಿಕ ಸೇವೆ ಮಾಡುವುದಾಗಿ ತಿಳಿಸಿದರು.
ದೇವಳದ ಆಡಳಿತ ಧರ್ಮದರ್ಶಿ ಕೃಷ್ಣ ಪ್ರಸಾದ್ ಅಡ್ಯಂತಾಯ, ಧರ್ಮದರ್ಶಿ ಜಯಾನಂದ ಹೋಬಳಿದಾರ್, ಉಪ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ರಾಮಕೃಷ್ಣ ಅಡಿಗ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ, ಉದ್ಯಮಿ ಕಾಪು ವಾಸುದೇವ ಶೆಟ್ಟಿ, ಪಿ.ಎಲ್. ಜೋಶ್ ಮೊದಲಾದವರು ಉಪಸ್ಥಿತರಿದ್ದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವತಿಯಿಂದ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ ಅವರು ಸಚಿವ ಸೊರಕೆ ಅವರನ್ನು ಸಮ್ಮಾನಿಸಿ, ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ - editor@kundapra.com