ಸೀಮೆ‌ಎಣ್ಣೆ ಸುರಿದುಕೊಂಡು ಆತ್ಮಹತ್ಯೆ

ಬೈಂದೂರು: ಉಪ್ಪುಂದ ಗ್ರಾಮದ ಚೌಕಿ ಕೋಟೆಬೆಟ್ಟು ನಿವಾಸಿ ಶಿವ ದೇವಾಡಿಗ (42) ಸೀಮೆ‌ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಇಲ್ಲಿನ ರಥಬೀದಿಯಲ್ಲಿ ನಡೆದಿದೆ.
     ರಾಮದುರ್ಗ ಮೂಲದವರಾದ ಈತ ಕಳೆದ 15 ವರ್ಷದ ಹಿಂದೆ ಮದುವೆಯಾಗಿ ಹೆಂಡತಿ ಮನೆಯಲ್ಲಿ ವಾಸಿಸುತ್ತಿದ್ದರು. ರೋಡ್ ರೋರ್ ಡ್ರೈವರ್ ಆಗಿ ಕೆಲಸಮಾಡುತ್ತಿದ್ದ ಈತ ಇತ್ತೀಚೆಗೆ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗಿದ್ದು ಇಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇತನ ದೇಹವು ಸಂಪೂರ್ಣ ಸುಟ್ಟು ಕರಕಲಾಗಿದೆ. ಪತ್ನಿ, 2 ಪುಟ್ಟ ಮಕ್ಕಳನ್ನು ಅಗಲಿದ್ದಾನೆ. 
 ಬೈಂದೂರು ವೃತ್ತ ನಿರೀಕ್ಷಕ ಅರುಣ ಬಿ. ನಾಯಕ್ ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com