ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ

ಕುಂದಾಪುರ: ಹೊಸಂಗಡಿ ಗ್ರಾಮದ ಹೊಳೆ ಶಂಕರನಾರಾಯಣ ನಿವಾಸಿ ರಾಜೀವ ಶೆಟ್ಟಿ (57) ಅವರು ಮನೆಯಲ್ಲಿ ಮದ್ಯಕ್ಕೆ ಯಾವುದೋ ವಿಷ ಪದಾರ್ಥ ಸೇವಿಸಿ ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜೀವ ಶೆಟ್ಟಿ ಅವರಿಗೆ ವಿಪರೀತ ಮದ್ಯಪಾನದ ಚಟವಿದ್ದು, ಹಣದ ಚಿಂತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಅಳಿಯ ಅಶೋಕ್‌ ಶೆಟ್ಟಿ ಅಮಾಸೆಬೈಲು ಠಾಣೆಯಲ್ಲಿ ದೂರು ನೀಡಿದ್ದಾರೆ.
     ಸಿದ್ದಾಪುರ ಗ್ರಾಮ ಪಂಚಾಯತ್‌ನಲ್ಲಿ ವಾಟರ್‌ಮ್ಯಾನ್‌ ಕೆಲಸ ನಿರ್ವಹಿಸುತ್ತಿರುವ ರಾಜೀವ ಶೆಟ್ಟಿ ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com