ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ

ಬೈಂದೂರು: ಶಿರೂರು ಗ್ರಾಮದ ನಿವಾಸಿ ಕೃಷ್ಣವೇಣಿ (40) ರವಿವಾರ ಬೆಳಗ್ಗಿನ ಜಾವ ಮನೆಯಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಮೃತಪಟ್ಟಿದ್ದಾರೆ.
       ಕಳೆದ 5 ವರ್ಷದ ಹಿಂದೆ ವಿಚ್ಚೇದನೆಯನ್ನು ಹೊಂದಿದ್ದ ಕೃಷ್ಣವೇಣಿ ಅವರು ಶಿರೂರು ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಬಹಳಷ್ಟು ಸಮಯದಿಂದ ಮಾನಸಿಕ ರೋಗದಿಂದ ಬಳಲುತ್ತಿದ್ದು, ಹಲವು ಕಡೆ ಚಿಕಿತ್ಸೆ ಕೊಡಿದ‌ರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಗ್ಗೆ ಮನನೊಂದು ಜೀವನದಲ್ಲಿ ಜಿಗುಪ್ಸೆಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಾಶೀನಾಥ ಅವರು ಬೈಂದೂರು ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸೀಮೆ ಎಣ್ಣೆ ಸುರಿದುಕೊಂಡು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com