ಕುಂದಾಪುರ: ಕಾಳಾವರ ಗ್ರಾಮದ ಬೊಬ್ಬರ್ಯ ದೈವಸ್ಥಾನದ ಸಮೀಪ ಬುಧವಾರ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರು ಹೊಂಬಾಡಿ-ಮಂಡಾಡಿ ನಿವಾಸಿ ಮಂಜುನಾಥ ಪೂಜಾರಿ (30) ಎಂದು ಗುರುತಿಸಲಾಗಿದೆ.
ಕಲ್ಲುಗಣಿಗಾರಿಕೆ ಕಾರ್ಮಿಕರಾಗಿರುವ ಇವರು ಕಳೆದ 15 ದಿನಗಳ ಹಿಂದೆ ಆತ್ಮಹತ್ಯೆಯ ವಿಫಲ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಮತರಿಗೆ ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.