ಕುಂದಾಪುರ : ಅರೆಹೊಳೆ ಬೈಪಾಸ್ ಬಳಿ ರಾ.ಹೆ.66ರಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕಾಪಿರ್ಯೋ ವಾಹನವೊಂದು ಢಿಕ್ಕಿಯಾದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರಾಜಸ್ತಾನ ಮೂಲದ ಬನವಾರಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಮೃತ ಬನವಾರಿ ಟೈಲ್ಸ್ ಕೆಲಸ ಮಾಡುವರಾಗಿದ್ದು, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ.