ಕುಂದಾಪುರ: ಕುಂದಾಪುರದ ಮೀನು ಮಾರುಕಟ್ಟೆಯ ಬಳಿ ದುಷ್ಕರ್ಮಿಗಳು ಓರ್ವ ವ್ಯಕ್ತಿಯನ್ನು ಕಡಿದು ಪರಾರಿಯಾದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ರಾತ್ರಿ ಮನೆ ತೆರಳುತ್ತಿದ್ದ ಜಯಚಂದ್ರ ಲೌಲಿ ಮೇಲೆ ನಾಲ್ವರು ದುಷ್ಕರ್ಮಿಗಳು ತಲಾರಿನ ಮೂಲಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಜಯಚಂದ್ರ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಿದೆ. ಈ ಹಲ್ಲೆಗೆ ಯಾವುದೇ ಕಾರಣ ತಿಳಿದು ಬಂದಿಲ್ಲ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.