ಕುಂದಾಪುರ: ಹಟ್ಟಿಯಂಗಡಿ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಕೆಂಚನೂರು ಗ್ರಾಮದ ಬಾಳಿಕೆರೆ ನಿವಾಸಿ ಮಂಜುನಾಥ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮಾರು ನಾಲ್ಕು ತಿಂಗಳಿಂದ ಕೆಂಚನೂರು ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಇವರು ಕುಂದಾಪುರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಎದೆ ನೋವಿನಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆಯುತ್ತಿದ್ದರು. ಇದೇ ವಿಚಾರವಾಗಿ ಮನನೊಂದ ಇವರು ರೈಲಿಗೆ ತಲೆಕೊಟ್ಟು ಮೃತಪಟ್ಟಿದ್ದಾರೆ ಎಂದು ಅವರ ಪತ್ನಿ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೃತ ಮಂಜುನಾಥ ಇತ್ತೀಚೆಗೆ ಅಂತರ್ಜಾತಿ ವಿವಾಹವಾಗಿದ್ದರು. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.