ಮನೆಗೆ ನುಗ್ಗಿ ಚಿನ್ನಾಭರಣ ಕಳವು

ಬೈಂದೂರು : ಗ್ರಾಮದ ಕಳವಾಡಿ ಕಾರಿಕಟ್ಟೆ ಬಳಿಯ ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಬೈಂದೂರು ಠಾನೆಯಲ್ಲಿ ದೂರು ದಾಖಲಾಗಿದೆ.
    ಕಳವಾಡಿಯ ಕೃಷ್ಣಪೂಜಾರಿ ಅವರು ಕೆಲಸಕ್ಕೆ ತೆರಳಿದಾಗ ಅವರ ಪತ್ನಿ ತನ್ನ ಮಗನನ್ನು ಕರೆದುಕೊಂಡು ಬರಲು ಅಂಗನವಾಡಿಗೆ ಹೋದಾಗ ಈ ಘಟನೆ ಸಮಭವಿಸಿದ್ದು, ಮನೆಯ ಒಳಗಡೆ ಕಬ್ಬಿಣದ ಪೆಟ್ಟಿಗೆಯಲ್ಲಿಟ್ಟಿದ್ದ ಸುಮಾರು 50 ಸಾವಿರ ಮೌಲ್ಯದ 25ಗ್ರಾಂ. ಚಿನ್ನದ ಆಭರಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಕೃಷ್ಣ ಪೂಜಾರಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com