ಕುಂದಾಪುರ: ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸುವಂತೆ ಕುಂದಾಪುರದ ನಿವಾಸಿ ಜಯಚಂದ್ರ ಅವರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸೆ.3ರಂದು ರಾತ್ರಿ ಗುಂಪೊಂದು ಹಲ್ಲೆ ನಡೆಸಿದ್ದು ಅವರಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಉಳಿದವರು ರಾಜಾರೋಷವಾಗಿ ಸಾರ್ವಜನಿಕವಾಗಿ ತಿರುಗಾಡುತ್ತಿದ್ದಾರೆ. ಹಲ್ಲೆಯಿಂದಾಗಿ ತಾನು ಆಸ್ಪತ್ರೆಯಲ್ಲಿದ್ದು, ಮುಂದೆ ಯಾವುದೇ ಉದ್ಯೋಗ ಮಾಡದ ಸ್ಥಿತಿಯಲ್ಲಿದ್ದೇನೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರೆ ಆರೋಪಗಳನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಮನವಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೂ ಹಾಗೂ ಗೃಹ ಸಚಿವರಿಗೂ ಅವರು ನೀಡಿದ್ದಾರೆ.,