ಒಂದೇ ಬೈಕಲ್ಲಿ 6 ಜನರ ಪ್ರಯಾಣ; ಕುಟುಂಬದ ನಾಲ್ವರ ಸಾವು

ತುಮಕೂರು: ತುಮಕೂರು ತಾಲೂಕಿನ ಕೋರ ಪೊಲೀಸ್‌ ಠಾಣಾ ವ್ಯಾಪ್ತಿಯ ಅಜ್ಜಗೊಂಡನಹಳ್ಳಿ ಕ್ರಾಸ್‌ ಬಳಿ ಬುಧವಾರ ಮಧ್ಯಾಹ್ನ ನಡೆದ ಕ್ಯಾಂಟರ್‌ ಹಾಗೂ ಬೈಕ್‌ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ತುಮಕೂರಿನ ಮರಳೂರು ದಿಣ್ಣೆಯ ಟಿಪ್ಪು ನಗರದ ಅಜರ್‌ ದಂಪತಿಗಳು ಬುಧವಾರ ಶಿರಾದಲ್ಲಿರುವ ತಮ್ಮ ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಭಾಗವಹಿಸಲು ತಮ್ಮ ನಾಲ್ವರು ಮಕ್ಕಳೊಂದಿಗೆ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಮನೆ ಬಿಟ್ಟ ಕೆಲವೆ ಹೊತ್ತಿನಲ್ಲಿ ರಾಷ್ಟ್ರೀಯ ಹೆದ್ದಾರಿ-4 ರ ಅಜ್ಜಗೊಂಡನಹಳ್ಳಿ ಬಳಿ ಬರುತ್ತಿದ್ದಂತೆ ಹಿಂದಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್‌ ಲಾರಿಯೊಂದು ಅಜರ್‌ರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಅಜರ್‌ ಪತ್ನಿ ರಜೀಯಾ ಬಾನು, ಮಕನಾ ಬಾನು(9), ಸಮೀರ್‌(6) ತಮ್ರಿನ್‌(2) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆದರೆ ಈ ಅಪಘಾತದಲ್ಲಿ ಬೈಕ್‌ ಚಲಾಯಿಸುತ್ತಿದ್ದ ಅಜರ್‌, ಆಸಿಫ್(2) ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಾದ ಅಜರ್‌, ಅಸಿಫ್ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಕೋರಾ ಠಾಣೆ ಪೊಲೀಸರು ಅಪಘಾತಕ್ಕೆ ಕಾರಣವಾದ ಕ್ಯಾಂಟರ್‌ ಚಾಲಕ ಮಾರುತಿಯನ್ನು ಬಂಧಿಸಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com