ಕುಂದಾಪುರ: ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೋಟಿತೀರ್ಥ ಕೆರೆಯ ಪಶ್ಚಿಮಭಾಗದಲ್ಲಿ ಗುರುವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.
ಕೆರೆಯಲ್ಲಿ ಸ್ನಾನಕ್ಕೆಂದು ಇಳಿದಾಗ ಅಕಸ್ಮಿಕವಾಗಿ ಮುಳುಗಿ ಮೃತಪಟ್ಟದ್ದಾಗಿ ಶಂಕೆ ವ್ಯಕ್ತಪಡಿಸಲಾಗಿದೆ ಎಂದು ಪ್ರಭಾಕರ ಶೆಟ್ಟಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.