ನೇಣುಬಿಗಿದುಕೊಂಡು ಆತ್ಮಹತ್ಯೆ

ಕುಂದಾಪುರ: ಉಡುಪಿ ತಾಲೂಕು ಚೇರ್ಕಾಡಿ ಗ್ರಾಮದ ಜಾರೆಜೆಡ್ಡು ಬಳಿಯ ನಿವಾಸಿ ಗಣೇಶ್‌ ಗಂಗೊಳ್ಳಿಯ ಕೆ.ಎಫ್‌ಡಿಸಿ ವಸತಿಗೃಹದಲ್ಲಿ ಫ್ಯಾನಿಗೆ ಲುಂಗಿಯಿಂದ ಗುರುವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಗಂಗೊಳ್ಳಿಯ ಕೆಎಫ್‌ಡಿಸಿಯಲ್ಲಿ ಉದ್ಯೋಗಿಯಾಗಿರುವ ಇವರು ಆರ್ಥಿಕ ಅಡಚಣೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕೆ ವ್ಯಕ್ತವಾಗಿದೆ. ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಕುರಿತು ಅವರ ಸಹೋದರ ಗಂಗೊಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ.ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮರವಂತೆ ಆಸ್ಪತ್ರೆಗೆ ಕಳುಹಿಸಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com