ಟ್ರಾಕ್ಸ್‌ ಪಲ್ಟಿ :5 ಸಾವು

ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ಟ್ರಾಕ್ಸ್‌ ಪಲ್ಟಿಯಾಗಿ 5 ಜನ ಸಾವಿಗೀಡಾಗಿ , 8 ಮಂದಿ ಗಂಭೀರವಾಗಿ ಗಾಯಗೊಂಡ ದುರ್ಘ‌ಟನೆ ಮಂಗಳವಾರ ನಡೆದಿದೆ.

ಮೃತರನ್ನು ಖಾನಾಪುರತಾಲೂಕಿನ   ಹಲಸಿಪುರ ಗ್ರಾಮದವರೆಂದು  ಗುರುತಿಸಲಾಗಿದ್ದು, ಸವದತ್ತಿ ಯಲ್ಲಮ್ಮ ದೇವಿಯ ದರ್ಶನ ಪಡೆದು ಹಿಂತಿರುಗುತ್ತಿದ್ದರು ಎಂದು ತಿಳಿದು ಬಂದಿದೆ .

ಗಂಭೀರವಾಗಿ ಗಾಯಗೊಂಡ 8 ಮಂದಿಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೊಡ್ಡವಾಡ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com