ಕುಂದಾಪುರ: ಕೊಲ್ಲೂರು ನಿತ್ಯಾನಂದ ಆಶ್ರಮಕ್ಕೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆಶ್ರಮದ ಮುಖ್ಯಸ್ಥ ಜಯಾನಂದ ಶನಿವಾರ ಕೊಲ್ಲೂರು ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಕಿಡಿಗೇಡಿಗಳ ಗುಂಪು ಕಲ್ಲು ತೂರಾಟ ನಡೆಸಿದ್ದು, ಆಶ್ರಮದಲ್ಲಿನ ನಿತ್ಯಾನಂದ ಗುರುಗಳ ದೇಗುಲದ ಗೋಪುರಕ್ಕೆ ಮತ್ತು ಶ್ರೀ ವಿಮಲಾನಂದ ಸ್ವಾಮೀಜಿಯವರ ಸಮಾಧಿಗೆ ಧಕ್ಕೆಯುಂಟಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಬಿಗಿ ಭದ್ರತೆ: ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಆಶ್ರಮಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಆಶ್ರಮಕ್ಕೆ ಎಸೆಯಲಾದ ಕಲ್ಲು, ಇಟ್ಟಿಗೆ ತುಂಡುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.