ಕುಂದಾಪುರ: ಮಹಿಳೆಯೊಂದಿಗೆ ಆನುಚಿತವಾಗಿ ವರ್ತನೆ ಮಾಡಿದ ಆರೋಪದಲ್ಲಿ ಶಂಕರನಾರಾಯಣ ಪೊಲೀಸ್ ಠಾಣಾ ಎಎಸ್ಐ ದೇವರಾಜ್ ಅವರನ್ನು ಬುಧವಾರ ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಸಂಜೆ ಶಂಕರನಾರಾಯಣದಿಂದ ಗಂಗೊಳ್ಳಿಗೆ ತೆರಳುತ್ತಿದ್ದ ಬಸ್ನಲ್ಲಿ ನನ್ನೊಂದಿಗೆ ದೇವ್ರಾಜ್ ಅನುಚಿತ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದರು.
ದೂರಿನ ಅನ್ವಯ ಗಂಗೊಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿ ದೇವ್ರಾಜ್ ಅವರನ್ನು ಬಂಧಿಸಿದ್ದಾರೆ. ನ್ಯಾಯಾಲಯ ದೇವ್ರಾಜ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ .
ದೇವ್ರಾಜ್ ಅವರನ್ನು ಪೊಲೀಸ್ ಇಲಾಖೆಯ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬೋರಲಿಂಗಯ್ಯ ಅವರು ತಿಳಿಸಿದ್ದಾರೆ.