ಕೊಲ್ಲೂರು: ಇಡೂರು ಬಳಿ ಸೋಮವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಾಪುರದಿಂದ ಕೊಲ್ಲೂರಿಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುದೂರಿನಿಂದ ಕುಂದಾಪುರಕ್ಕೆ ಬರುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿತ್ತು. ರಿಕ್ಷಾ ಚಾಲಕ ಕೊಲ್ಲೂರು ನಿವಾಸಿ ನಾರಾಯಣ ಪೂಜಾರಿ ಹಾಗೂ ಅವರೊಂದಿಗೆ ಪ್ರಯಾಣಿಸುತ್ತಿದ್ದ ಆತನ ಪತ್ನಿ ಗಿರಿಜಾ ಪೂಜಾರಿ, ಎರಡು ತಿಂಗಳ ಮಗು ಪುತ್ರಿ ರೇಖಾ ಸಹಿತವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ರೇಖಾ ಅವರು 2 ತಿಂಗಳ ಮಗುವನ್ನು ಕುಂದಾಪುರ ಆಸ್ಪತ್ರೆಗೆ ಪರೀಕ್ಷೆಗಾಗಿ ಕರೆದುಕೊಂಡು ಹೋಗಿ ತಂದೆ ತಾಯಿಯೊಡನೆ ವಾಪಸು ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. ಕೊಲ್ಲೂರು ಎಸ್.ಐ. ಜಯಂತ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.