ಪೊಲೀಸ್‌ ಮೇಲೆ ಹಲ್ಲೆ: ಆರೋಪಿಗೆ ಜಾಮೀನು

ಕುಂದಾಪುರ: ಕರ್ತವ್ಯ ನಿರತ ಸಬ್‌ ಇನ್‌ಸ್ಪೆಕ್ಟರ್‌ ಹಾಗೂ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪಿ ಗುರುರಾಜ್‌ ಚಾತ್ರನಿಗೆ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿದೆ.

ಜೂ.23ರಂದು ಕುಂದಾಪುರ ಪೊಲೀಸ್‌ ಠಾಣೆಯ ಕರ್ತವ್ಯ ನಿರತ ಮಹಿಳಾ ಪೊಲೀಸ್‌ ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ ಸುಧಾ ಪ್ರಭು ಮತ್ತು ಪೊಲೀಸ್‌ ಸಿಬ್ಬಂದಿ ಜಯಕರ್‌ ಅವರ ‌ ಮೇಲೆ ಪೊಲೀಸ್‌ ಠಾಣೆಯಲ್ಲಿ ಆರೋಪಿ ಹಲ್ಲೆ ನಡೆಸಿದ್ದನು ಎಂದು ಆರೋಪಿಸಲಾಗಿತ್ತು. ಆರೋಪಿಯ ವಿರುದ್ಧ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಆರೋಪಿ ಗುರುರಾಜ್‌ ಚಾತ್ರ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದನು. ಆರೋಪಿಯ ವಿರುದ್ಧ ಮಾಡಲಾದ ಆರೋಪ ಸತ್ಯಕ್ಕೆ ದೂರವಾಗಿದ್ದು, ಆರೋಪಿ ಒಳ್ಳೆಯ ವ್ಯಕ್ತಿತ್ವ ಹೊಂದಿದವನಾಗಿದ್ದು, ಯಾವುದೇ ಕ್ರಿಮಿನಲ್‌ ಹಿನ್ನೆಲೆಯನ್ನು ಹೊಂದಿದವನಲ್ಲವೆಂದು ವಾದಿಸಲಾಗಿತ್ತು. ಅರ್ಜಿದಾರರ ಪರ ವಾದವನ್ನು ಎತ್ತಿ ಹಿಡಿದ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್‌. ವಿ. ಪಾಟೀಲ್‌ ಆರೋಪಿಗೆ ಶರ್ತಬದ್ದ ಜಾಮೀನು ನೀಡಿರುತ್ತಾರೆ.ಆರೋಪಿ ಪರವಾಗಿ ಕುಂದಾಪುರದ ಹಿರಿಯ ನ್ಯಾಯವಾದಿ ಕಾಳಾವರ ಉದಯ ಶೆಟ್ಟಿ ವಾದಿಸಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com