ಶಿರೂರು: ಬೈಂದೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಹಾಗೂ ಗೋಕರ್ಣದಿಂದ ಎರ್ನಾಕುಲಂ ಕಡೆಗೆ ಸಂಚರಿಸುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ನಿಯಂತ್ರಣ ತಪ್ಪಿ ಸಿಂಡಿಕೇಟ್ ಬ್ಯಾಂಕ್ ಆವರಣಕ್ಕೆ ನುಗ್ಗಿದ ಘಟನೆ ಶಿರೂರು ಕೆಳಪೇಟೆ ಬಳಿ ಶುಕ್ರವಾರ ನಡೆದಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಲಕ್ಷ್ಮೀ ಕುಟ್ಟಿ(70) ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗಯೇ ಸಾವನ್ನಪ್ಪಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.