ಹೆಮ್ಮಾಡಿ : ಗ್ರಾಮದ ಮೊವತ್ತುಮುಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ಸುಲೇಟರ್ ಲಾರಿ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಭಾನುವಾರ ಮತಪಟ್ಟಿದ್ದಾರೆ. ಮೃತಪಟ್ಟವರನ್ನು ಮೊವತ್ತುಮುಡಿ ನಿವಾಸಿ ಎಲ್ಕೆನ್ ಒಲಿವೇರಾ (80) ಎಂದು ಗುರುತಿಸಲಾಗಿದೆ. ಹೆಮ್ಮಾಡಿ ಮೊವತ್ತುಮುಡಿ ಬಸ್ತಂಗುದಾಣ ಸಮೀಪ ನಿಂತುಕೊಂಡಿದ್ದ ಅವರಿಗೆ ಲಾರಿ ಡಿಕ್ಕಿ ಹೊಡೆದಿದ್ದು ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.