ಉಪ್ಪುಂದ: ಚಿನ್ನ ಅಪಹರಿಸಿದ ಪ್ರಮುಖ ಆರೋಪಿ ಸೆರೆ

ಬೈಂದೂರು: ಅ.7ರಂದು ರಾತ್ರಿ ಉಪ್ಪುಂದ ಅಂಬಾಗಿಲು ಎಂಬಲ್ಲಿ ಸ್ವರ್ಣೋದ್ಯಮಿ ಗಣೇಶ್ ಶೇಟ್ ಅವರಿಗೆ ಚೂರಿ ಇರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಪ್ರಕರಣದ ಪ್ರಮುಖ ಆರೋಪಿ ರವಿ ಜತ್ತನ್ ಪೊಲೀಸ್ ಬಲೆಗೆ ಬಿದ್ದಿದ್ದಾನೆ. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ವಿಶೇಷ ಪೊಲೀಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲ್ಪಟ್ಟಿದ್ದಾನೆ. ವ್ಯವಹಾರ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಗಣೇಶ್ ಶೇಟ್, ಪುತ್ರ ಸುಧೀಂದ್ರ ಶೇಟ್, ಪುತ್ರಿ ದಿವ್ಯಶ್ರೀ ಅವರನ್ನು ಅಡ್ಡಗಟ್ಟಿದ ಐವರ ತಂಡ ಕಣ್ಣಿಗೆ ಮೆಣಸಿನ ಪುಡಿ ಎರಚಿ ಚೂರಿಯಿಂದ ಇರಿದು 12ಲಕ್ಷ ರೂಪಾಯಿ ಮೊತ್ತದ ಚಿನ್ನಾಭರಣಗಳಿದ್ದ ಬ್ಯಾಗ್ ಅಪಹರಿಸಿದ್ದರು. 

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಶಿವಪ್ರಕಾಶ್, ಚಂದ್ರಹಾಸ್, ಪ್ರದೀಪ್ ಪೂಜಾರಿ, ದುರ್ಗಾದಾಸ್ ನಿಟ್ಟೂರು ಎಂಬವರನ್ನು ಬಂಧಿಸಲಾಗಿದ್ದು ಪ್ರಮುಖ ಆರೋಪಿ ರವಿ ಜತ್ತನ್ ಉಡುಪಿ ತಪ್ಪಿಸಿಕೊಂಡಿದ್ದ. ಮಡಿಕೇರಿ ಸಮೀಪ ಈತನನ್ನು ಬಂಧಿಸಲಾಗಿದೆ.

ಆರೋಪಿ ಉಡುಪಿಯ ರವಿ ಜತ್ತನ್ ಎಂಬಾತನನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ 15 ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸ್ವರ್ಣೋದ್ಯಮಿಯಿಂದ ಲೂಟಿ ಮಾಡಿದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈತನ ವಿರುದ್ಧ 18 ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಧಾರವಾಡ ಜಿಲ್ಲೆಯಲ್ಲಿ ಈತನ ವಿರುದ್ಧ ಬ್ಯಾಂಕ್ ದರೋಡೆ, ಕೊಲೆ, ಕೊಲೆ ಯತ್ನ, ಶಸ್ತ್ರಾಸ್ತ್ರ ಕಾಯಿದೆ, ಕಳವು ಕೃತ್ಯಗಳು ದಾಖಲಾಗಿವೆ. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 ಕುಂದಾಪ್ರ ಡಾಟ್ ಕಾಂ | ಅಫರಾದ-ಅಫಘಾತ ಸುದ್ದಿಗಳು All Rights Reserved.
Template Design by Herdiansyah Hamzah | Published by Kundapra Dot Com